Friday, April 26, 2024
spot_imgspot_img
spot_imgspot_img

ಹಿಂದಿಯನ್ನು ಹೇರಲು ಬಂದರೆ, ನಾವೆಂದೂ ಸುಮ್ಮನೆ ಕೂರುವುದಿಲ್ಲ-ದುನಿಯಾ ವಿಜಯ್

- Advertisement -G L Acharya panikkar
- Advertisement -

ಬೆಂಗಳೂರು: ನಟ – ‘ದುನಿಯಾ’ ವಿಜಯ್​ ಹಿಂದಿಯನ್ನು ಹೇರಲು ಬಂದರೆ, ನಾವೆಂದೂ ಸುಮ್ಮನೆ ಕೂರುವುದಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಸೋಷಿಯಲ್​ ಮೀಡಿಯಾದಲ್ಲೊಂದು ಸಣ್ಣ ಪತ್ರ ಬರೆದಿರುವ ಅವರು, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.


ಹಿಂದಿ ದಿವಸ್​ ಆಚರಿಸಲು ನಾವು ಹಿಂದಿ ಭಾಷಿಕರಲ್ಲ, ನಮ್ಮ ರಾಜ್ಯದಲ್ಲಿ ಆಡಳಿತ ಭಾಷೆ ಹಿಂದಿಯೂ ಅಲ್ಲ. ನನಗೆ ಹುಟ್ಟಿದಾಗಿನಿಂದಲೂ ಗೊತ್ತಿರುವುದು ಕನ್ನಡ ಒಂದೇ. ಆಗಿನಿಂದಲೂ ನಾನು ನಮ್ಮ ಕನ್ನಡದ ಮೇಲೆ ಬೇರೆ ಭಾಷೆಗಳ ಆಕ್ರಮಣ, ಯಾವ ಮಟ್ಟಕ್ಕೆ ಇದೆ ಎಂಬುದನ್ನು ಬಹಳ ಹತ್ತಿರದಿಂದ ಕಂಡಿದ್ದೇನೆ.

ಪ್ರತಿಯೊಬ್ಬ ಮನುಷ್ಯನಿಗೂ ತನ್ನ ಮಾತೃಭಾಷೆ ಜೀವನ ಮಾಡುವ ಬಗೆ ಮತ್ತು ಜೀವನ ಶೈಲಿಯನ್ನು ಕಲಿಸುತ್ತದೆ. ಹಾಗಂತ ನಾನು ಹಿಂದಿ ಕಲಿಯುವುದೇ ಇಲ್ಲ ಎಂದು ಹೇಳುತ್ತಿಲ್ಲ. ಕಲಿಯುತ್ತೇನೆ, ಅದರ ಅವಶ್ಯಕತೆ ನನಗೆ ಎಷ್ಟಿದೆಯೋ ಅಷ್ಟು ಮಾತ್ರ. ಅದನ್ನು ಬಿಟ್ಟು ಸಂಪೂರ್ಣವಾಗಿ ನಮ್ಮ ಮೇಲೆ ಹೇರಲು ಬಂದರೆ ನಾವೆಂದೂ ಸುಮ್ಮನೆ ಕೂರುವುದಿಲ್ಲ. ಕನ್ನಡದ ಬಗೆಗಿನ ಶ್ರದ್ಧೆ ಇಂದು ನನ್ನನ್ನು ಇಲ್ಲಿಯವರೆಗೂ ಕರೆತಂದಿದೆ. ಪ್ರತಿಯೊಬ್ಬ ಮನುಷ್ಯ ಜೀವನ ಪ್ರೀತಿಗಾಗಿ ಹಾತೊರೆಯುತ್ತಾನೆ.


ನಾವು ಕನ್ನಡಿಗರು ಯಾವಾಗಲೂ ನಮ್ಮ ಕನ್ನಡತನದ ಅಸ್ಮಿತೆಗಾಗಿ ಹಂಬಲಿಸೋಣ. ನಮ್ಮ ಸಂವಿಧಾನದಂತೆ ನಾವು ಬದುಕುತ್ತಿದ್ದೇವೆ. ಬದುಕಲು ಬಿಡಿ. ಹಿಂದಿ ಹೇರಿಕೆಯನ್ನು ಎಂದಿಗೂ ಸಹಿಸುವುದಿಲ್ಲ.

- Advertisement -

Related news

error: Content is protected !!