Monday, August 31, 2026
spot_imgspot_img
spot_imgspot_img

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಬೆಳ್ತಂಗಡಿಯಲ್ಲಿ NIA ದಾಳಿ

- Advertisement -
- Advertisement -

ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ NIAಅಧಿಕಾರಿಗಳು ಬೆಳ್ತಂಗಡಿಯಲ್ಲಿ ದಾಳಿ ನಡೆಸಿದ್ದಾರೆ

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ, ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ಮನೆ ಮೇಲೆ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ವೇಳೆ ನೌಷದ್ ಮನೆಯಲ್ಲಿರಲ್ಲಿಲ್ಲ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ಸೇರಿ ಒಟ್ಟು 6 ಕಡೆ ಏಕಕಾಲಕ್ಕೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಎಲೆಕ್ಟ್ರಾನಿಕ್ ಡಿವೈಸ್ ಸೇರಿದಂತೆ ಮಹತ್ವದ ದಾಖಲೆ ವಶ ಪಡೆದ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.

- Advertisement -

Related news

error: Content is protected !!