- Advertisement -
- Advertisement -


ಹಿರಿಯಡ್ಕ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ವೇಳೆ ಹಿರಿಯಡ್ಕ ಪೊಲೀಸರು ದಾಳಿ ನಡೆಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಿ, ಜೂಜಾಟಕ್ಕೆ ಬಳಸಿದ್ದ ಪರಿಕರ ವಶಕ್ಕೆ ಪಡಿಸಿಕೊಂಡಿರುವ ಘಟನೆ ಉಡುಪಿ ತಾಲೂಕು ಪೆರ್ಣಂಕಿಲದಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ವಿಜಯ ಪ್ರಕಾಶ್, ರಾಜೇಶ್, ಗಣೇಶ, ಮಹೇಶ, ಮೆಲ್ವಿನ್, ಭೋಜ, ರವೀಂದ್ರ ಎಂದು ತಿಳಿದು ಬಂದಿದೆ.
ಆರೋಪಿಗಳ ಬಳಿ ಇದ್ದ ಕೋಳಿ ಅಂಕಕ್ಕೆ ಬಳಸಿದ 20 ಕೋಳಿ ಹುಂಜಗಳು ಹಾಗೂ ನಗದು 14,640/- ರೂಪಾಯಿ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -