- Advertisement -
- Advertisement -



ನಗೋಯಾ: ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ ರಿಕರ್ವ್ ಆರ್ಚರಿಯಲ್ಲಿ ಭಾರತ ತಂಡವು ದೇಶದ ಇತಿಹಾಸದಲ್ಲೇ ಮೊದಲ ಚಿನ್ನದ ಪದಕವನ್ನು ಗೆದ್ದು ಇತಿಹಾಸ ನಿರ್ಮಿಸಿದೆ.
ಐಚಿ ನಗೋಯಾದಲ್ಲಿ ನಡೆಯುತ್ತಿರುವ 20ನೇ ಏಷ್ಯನ್ ಗೇಮ್ಸ್‌ನ ಮಹಿಳೆಯರ ರಿಕರ್ವ್ ಆರ್ಚರಿ ವಿಭಾಗದಲ್ಲಿ ಭಾರತ ತಂಡವು 10 ಬಾರಿ ಚಾಂಪಿಯನ್ ಆಗಿದ್ದ ದಕ್ಷಿಣ ಕೋರಿಯಾವನ್ನು 5-3 ಅಂತರದಿಂದ ಸೋಲಿಸಿ, ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದು, ಈ ಮೂಲಕ ಭಾರತ 11ನೇ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.
ಅಂಕಿತಾ ಭಕತ್, ಕೀರ್ತಿ ಶರ್ಮಾ ಮತ್ತು ಕುಮ್ಕುಮ್ ಅನಿಲ್ ಮೊಹದ್ ಅವರನ್ನು ಒಳಗೊಂಡ ಭಾರತೀಯ ತಂಡವು ಮಹಿಳಾ ರಿಕರ್ವ್ ವಿಭಾಗದಲ್ಲಿ ದೇಶಕ್ಕೆ ಮೊಟ್ಟಮೊದಲ ಬಂಗಾರದ ಪದಕವನ್ನು ತಂದುಕೊಟ್ಟಿದೆ. ಮಹಿಳೆಯರ ರಿಕರ್ವ್ ಆರ್ಚರಿ ವಿಭಾಗದಲ್ಲಿ ಭಾರತ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿ, ಚಿನ್ನ ಗೆದ್ದಿದೆ.
ಈ ಮೂಲಕ ಭಾರತದ ಒಟ್ಟು ಪದಕಗಳ ಸಂಖ್ಯೆ 67ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 11 ಚಿನ್ನ, 23 ಬೆಳ್ಳಿ ಹಾಗೂ 33 ಕಂಚಿನ ಪದಕಗಳು ಸೇರಿರುವುದಾಗಿ ತಿಳಿದುಬಂದಿದೆ.
- Advertisement -








