Sunday, June 29, 2025
spot_imgspot_img
spot_imgspot_img

ಹಿಟ್ ಆ್ಯಂಡ್ ರನ್ ಪಾದಚಾರಿ ಮೃತ್ಯು..!

- Advertisement -
- Advertisement -

ಸಕಲೇಶಪುರ: ಹಿಟ್ ಆ್ಯಂಡ್ ರನ್ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಬೈಪಾಸ್‌ನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕೌಡಳ್ಳಿ ಗ್ರಾಮದ ನಿವಾಸಿ ಮಂಜುನಾಥ್ (ಗುಂಡ) (46) ಎಂದು ಗುರುತಿಸಲಾಗಿದೆ.

ಇವರು ಮುಂಜಾನೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದೆ. ಕೆಳಗೆ ಬಿದ್ದು ಮೃತಪಟ್ಟ ಅವರ ಮೇಲೆ ಬೇರೆ ವಾಹನಗಳೂ ಹರಿದಿದ್ದು ಮೃತದೇಹ ಸಂಪೂರ್ಣ ನಜ್ಜುಗುಜ್ಜಾಗಿ, ದೇಹದ ಭಾಗಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ನಗರ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!