Saturday, June 6, 2026
spot_imgspot_img
spot_imgspot_img

ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 4ರಿಂದ 5ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜು.5ರಂದು ದ.ಕ.ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಮುಗ್ಧ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.5ರಂದು ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!