- Advertisement -
- Advertisement -



ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳು ಅಲ್ಲದೇ ಪದವಿ ಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ಭಾರತೀಯ ಹವಾಮಾನ ಇಲಾಖೆ ಮುಂದಿನ ಎರಡು ದಿನಗಳಲ್ಲಿ, ಜುಲೈ 6 ಮತ್ತು 7, ರಂದು ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ರೆಡ್ ಅಲರ್ಟ್ ಸೂಚಿಸಿದೆ.
- Advertisement -