- Advertisement -
- Advertisement -


ಬೆಂಗಳೂರು: ರಾಜ್ಯದಲ್ಲಿ ಅಪರಾಧ ಹಾಗೂ ಮಾದಕ ದ್ರವ್ಯ ಚಟುವಟಿಕೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುವುದು ಸೇರಿದಂತೆ ಮಹಿಳೆಯರ ಸುರಕ್ಷತೆಗೆ ಮತ್ತಷ್ಟು ಹೆಚ್ಚಿನ ಒತ್ತು ನೀಡಬೇಕು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ನಗರದ ಕೋರಮಂಗಲದ ಕೆಎಸ್‌ಆರ್‌ಪಿ ಪೆರೇಡ್ ಮೈದಾನದಲ್ಲಿ ಇಂದು ನಡೆದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿಯವರ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಶಾಂತಿ ನೆಲೆಸಬೇಕು. ಇದರ ಪರಿಣಾಮ ರಾಜ್ಯಕ್ಕೆ ಹೆಚ್ಚು ಬಂಡವಾಳ ಹರಿದು ಬರಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿ, ಉದ್ಯೋಗಗಳು ಹೆಚ್ಚಾಗಲಿವೆ ಎಂದರು.ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದರ ಜೊತೆಗೆ ಜನರ ನೆಮದಿಯನ್ನು ಕಾಪಾಡಲಾಗಿದೆ.
- Advertisement -








