- Advertisement -
- Advertisement -
ಉಡುಪಿ: ಪುಲಿಕೇಶಿ ನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ಮುತ್ತಿಗೆ ಮತ್ತು ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದುಷ್ಕರ್ಮಿಗಳ ಕ್ರಮವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಂಡಿಸಿದ್ದಾರೆ.
ಉಡುಪಿ ಪ್ರವಾಸದಲ್ಲಿರುವ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಪುಂಡಾಟಿಕೆ ಗಮನಕ್ಕೆ ಬಂದಿದೆ. ಬೆಂಕಿ ಹಚ್ಚುವುದು, ಗಲಾಟೆ ಮಾಡುವುದು ಕಾನೂನು ಬಾಹಿರ ಕೃತ್ಯವಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದರು.
ಹೆಚ್ಚುವರಿ ಪೊಲೀಸರನ್ನು ರವಾನೆ ಮಾಡಲಾಗಿದ್ದು, ಅವರಿಗೆ ಸಂಪೂರ್ಣ ಅಧಿಕಾರವನ್ನು ಕೊಡಲಾಗಿದೆ. ಪೊಲೀಸರು ಪರಿಸ್ಥಿತಿ ಹತೋಟಿಗೆ ತರುತ್ತಾರೆ. ತಪ್ಪು ಮಾಡಿದವರು ಎಷ್ಟೇ ದೊಡ್ಡವರಾಗಿದ್ದರೂ ಕಠಿಣ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
- Advertisement -