- Advertisement -
- Advertisement -






ಹೊನ್ನಾವರ: ತಾಲೂಕಿನ ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಕಾರಣ ಇಬ್ಬರು ಸಜೀವ ದಹನಗೊಂಡ ಅವಘಡ ಮಂಗಳವಾರ ತಡರಾತ್ರಿ ನಡೆದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಕಾರಿನಲ್ಲಿದ್ದ ಇಬ್ಬರು ಗುರುತು ಸಿಗಲಾರದಷ್ಟು ಸುಟ್ಟು ಕರಕಲಾಗಿದ್ದಾರೆ. ಮೇಲ್ನೋಟಕ್ಕೆ ಕಾರು ಮರಕ್ಕೆ ಢಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿರುವ ಸಾಧ್ಯತೆ ಕಂಡು ಬಂದಿದೆ. ಕಾರಿನ ನಂಬರ್ ಪ್ಲೇಟ್ ಕೂಡ ಸುಟ್ಟು ಹೋಗಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರು ಮತ್ತು ಕಾರಿನಲ್ಲಿ ಇದ್ದವರ ಗುರುತು ಪತ್ತೆ ಆರಂಭಿಸಿದ್ದಾರೆ.
- Advertisement -








