Sunday, June 14, 2026
spot_imgspot_img
spot_imgspot_img

ಪೌರ ಕಾರ್ಮಿಕರಿಗೆ ಸನ್ಮಾನ

- Advertisement -
- Advertisement -

ವಿಟ್ಲ: ಕಾರ್ಮಿಕ ದಿನಾಚರಣೆ ಪ್ರಯುಕ್ತ ವಿಟ್ಲ ಪಟ್ಟಣ ಪಂಚಾಯಿತಿ ಹಾಗೂ ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರು ಕೊರೊನಾ ವಾರಿಯರ್ಸ್ ಗಳನ್ನು ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪೌರ ಕಾರ್ಮಿಕರನ್ನು ಸನ್ಮಾನಿಸಿದರು.


ಈ ಸಂದರ್ಭ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ, ಉಪಾಧ್ಯಕ್ಷ ಜಯಂತ ನಾಯ್ಕ, ಲಯನ್ಸ್ ಕ್ಲಬ್ ಜಿಲ್ಲಾ ಸಂಪುಟ ಕೋಶಾಧಿಕಾರಿ ಮೊಹಮ್ಮದ್ ಇಕ್ಬಾಲ್, ಜಿಲ್ಲಾ ಪಿಆರ್ ಓ ವಿಟ್ಲ ಮಂಗೇಶ್, ವಿಟ್ಲ ಲಯನ್ಸ್ ಕ್ಲಬ್ ಕಾರ್ಯದರ್ಶಿ ಹರ್ಷಿತ್ ಕುಮಾರ್, ಖಜಾಂಜಿ ಭಾರತಿ ಪ್ರಕಾಶ್, ಸದಸ್ಯರಾದ ಆದಂ ಒಕ್ಕೆತ್ತೂರು, ದೇವಿಪ್ರಸಾದ್ ಶೆಟ್ಟಿ, ಲೂಹಿಸ್ ಮಸ್ಕರೇಂಞಸ್, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರಾದ ಅರುಣ್ ಎಂ ವಿಟ್ಲ, ರಾಮ್ ದಾಸ್ ಶೆಣೈ, ಹಸೈನಾರ್ ನೆಲ್ಲಿಗುಡ್ಡೆ, ಚಂದ್ರಕಾಂತಿ ಶೆಟ್ಟಿ, ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!