Thursday, June 11, 2026
spot_imgspot_img
spot_imgspot_img

ಮಧ್ಯಪ್ರಾಚ್ಯ ಸಂಘರ್ಷ ಮತ್ತೆ ಉಲ್ಬಣ – ಹಾರ್ಮುಜ್‌ ಜಲಸಂಧಿ ಸಂಪೂರ್ಣ ಬಂದ್‌ ಮಾಡಿದ ಇರಾನ್‌

- Advertisement -
- Advertisement -

ಟೆಹ್ರಾನ್: ಇರಾನ್‌, ಅಮೆರಿಕ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ ಬಂದ್‌ ಮಾಡಿದೆ.

ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿರುವುದಾಗಿ ಇರಾನ್ ಘೋಷಿಸಿದ್ದು, ಈ ಜಲಸಂಧಿಯನ್ನು ದಾಟಲು ಪ್ರಯತ್ನಿಸುವ ಯಾವುದೇ ಹಡಗಿನ ಮೇಲೆ ದಾಳಿ ಮಾಡಲಾಗುವುದು ಎಂದು ಐಆರ್‌ಜಿಸಿಯಿಂದ ಅಧಿಕೃತ ಘೋಷಣೆ ಮಾಡಿದೆ.

ಎಲ್ಲ ದೇಶಗಳಿಗೂ ಐಆರ್‌ಜಿಸಿ ಎಚ್ಚರಿಕೆ ಸಂದೇಶ ರವಾನಿಸಿದೆ. ಹಾರ್ಮುಜ್‌ ಮೇಲಿನ ನಿರ್ಬಂಧದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ ಇದೆ. ದೇಶದ ಉನ್ನತ ಜಂಟಿ ಮಿಲಿಟರಿ ಕಮಾಂಡ್, ವಾಣಿಜ್ಯ ಹಡಗುಗಳು ಮತ್ತು ತೈಲ ಟ್ಯಾಂಕರ್‌ಗಳು ಸೇರಿದಂತೆ ಎಲ್ಲಾ ಸಂಚಾರಕ್ಕೂ ಹಾರ್ಮುಜ್ ಜಲಸಂಧಿಯನ್ನು ಸ್ಥಗಿತಗೊಳಿಸಲು ಆದೇಶಿಸಿದೆ.

ಬುಧವಾರ ಇರಾನ್ ವಿರುದ್ಧ ಅಮೆರಿಕ ಮತ್ತೊಂದು ಸರಣಿ ಮಿಲಿಟರಿ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ ನಂತರ ಈ ಬೆಳವಣಿಗೆ ನಡೆದಿದ್ದು, ಇದು ಮೂರು ತಿಂಗಳಿಗೂ ಹೆಚ್ಚು ಕಾಲ ಮುಂದುವರಿದಿರುವ ಸಂಘರ್ಷವನ್ನು ಮತ್ತಷ್ಟು ಹೆಚ್ಚಿಸಿದೆ.

- Advertisement -

Related news

error: Content is protected !!