Sunday, June 30, 2024
spot_imgspot_img
spot_imgspot_img

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ – ದೇವರ ದರುಶನಕ್ಕೆ ಹೋದವರು ಮಸಣ ಸೇರಿದರು

- Advertisement -G L Acharya panikkar
- Advertisement -

ಶಿವಮೊಗ್ಗ ಮೂಲದ 15 ಜನರು ಟಿಟಿ ವಾಹನದಲ್ಲಿ ಗುರುವಾರ (ಜೂ.27) ರಂದು ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳಿದ್ದರು. ದೇವಿ ದರ್ಶನ ಪಡೆದು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳಿ ಊರಿಗೆ ಹೋಗುವಾಗ ಭೀಕರ ಅಪಘಾತ ಸಂಭವಿಸಿದೆ. 13 ಜನರು ಮೃತಪಟ್ಟಿದ್ದಾರೆ.

ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಪರಶುರಾಮ್ ​​(45), ಭಾಗ್ಯ (40), ನಾಗೇಶ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾ ಬಾಯಿ (65), ಪುಣ್ಯ (50), ಮಂಜುಳಾಬಾಯಿ, ಚಾಲಕ ಆದರ್ಶ್ (23), ಮಾನಸ (24), ರೂಪಾ (40), ಮಂಜುಳಾ (50) ಮೃತರು ಮೃತಪಟ್ಟವರು. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

ಈ ಬಗ್ಗೆ ಹಾವೇರಿ ಜಿಲ್ಲಾ ಪೊಲೀಸ್​ ವರಿಷ್ಠಾದಿಕಾರಿ ಅಂಶಿಕುಮಾರ್ ಮಾತನಾಡಿ, ಟಿಟಿ ವಾಹನದಲ್ಲಿದ್ದ ಒಟ್ಟು 15 ಜನರೂ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಮಹಿಳೆಯರು, ಎರಡು ಪುಟ್ಟ ಕಂದಮ್ಮಗಳು, ಇಬ್ಬರು ಗಂಡು ಮಕ್ಕಳು, ಡ್ರೈವರ್ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಲಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ಮಾಹಿತಿ ನೀಡಿದರು.

- Advertisement -

Related news

error: Content is protected !!