Monday, July 20, 2026
spot_imgspot_img
spot_imgspot_img

ಮಿತ್ತೂರಿನಲ್ಲಿ ಭೀಕರ ಅಪಘಾತ; ಪಿಕಪ್-ಆಕ್ಟಿವಾ ಡಿಕ್ಕಿ- ಸವಾರ ಗಂಭೀರ ಗಾಯ

- Advertisement -
- Advertisement -

ಪುತ್ತೂರು: ಪುತ್ತೂರು-ಮಾಣಿ ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಮಹಿಂದ್ರಾ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕಬಕ ನಿವಾಸಿ, ಸೋಫಾ ಹಾಗೂ ವಾಹನಗಳ ಕುಶನ್ ಕೆಲಸ ಮಾಡಿಕೊಂಡಿದ್ದ ಸಲೀಂ(52) ಗಾಯಗೊಂಡವರು.

ಸಲೀಂ ಅವರು ಮಿತ್ತೂರು ದಾರುಲ್ ಇಸ್ಲಾಂ ಶಿಕ್ಷಣ ಸಂಸ್ಥೆಯ ವಾಹನದ ಕೆಲಸವನ್ನು ನೋಡಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಕಬಕ ಕಡೆಯಿಂದ ಮಿತ್ತೂರು ಕಡೆಗೆ ಮಿತಿಮೀರಿದ ವೇಗದಲ್ಲಿ ಬಂದ ಮಹಿಂದ್ರಾ ಪಿಕಪ್ ವಾಹನವು ಸಲೀಂ ಅವರ ಆಕ್ಟಿವಾ ಸ್ಕೂಟರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸ್ಕೂಟರ್‌ಗೆ ಡಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿದ ಮಹಿಂದ್ರಾ ಪಿಕಪ್ ರಸ್ತೆ ಬದಿಯ ಗುಡ್ಡದಂತಿದ್ದ ಜಾಗಕ್ಕೆ ನುಗ್ಗಿ ಪಲ್ಟಿ ಹೊಡೆದಿದೆ. ಪಿಕಪ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಘಟನೆಗೆ ಪ್ರಮುಖ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಡಿಕ್ಕಿಯ ತೀವ್ರತೆಯಿಂದ ಸಲೀಂ ಅವರು ಹೆಲ್ಮೆಟ್ ಧರಿಸಿದ್ದರೂ ಅವರ ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಹಾಗೂ ದಾರಿಹೋಕರು ಸೇರಿ ಗಾಯಾಳುವನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

Related news

error: Content is protected !!