- Advertisement -
- Advertisement -






ರಾಯಚೂರು: ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ 8 ಜನ ಭೀಕರವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿಯ ಚಿಲಕನಡೋಣ ಬಳಿ ನಡೆದಿದೆ.
ಹಾಸನ, ಚಿಕ್ಕಮಗಳೂರು ಮೂಲದ ಅಮೃತ, ತೇಜಶ್ವಿನಿ, ಧನ್ಯ, ದೀಪಿಕಾ, ದಿಕ್ಷಿತ, ಪ್ರತಾಪ್, ಕುಮಾರ್, ಯಶೋದಮ್ಮ ಮೃತರು. ಮೂರು ವರ್ಷದ ಮಗು ಸೇರಿ ಐವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇಂದು (ಏ.16) ಜಾವ 4 ಗಂಟೆ ಸುಮಾರಿಗೆ ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಈ ವೇಳೆ ಮಂತ್ರಾಲಯಕ್ಕೆ ಹೋಗುತ್ತಿದ್ದ ಬುಲೆರೋ ವಾಹನಕ್ಕೆ ಬೀದರ್‌ನಿಂದ ತುಮಕೂರಿಗೆ ಹೋಗುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ 8 ಜನ ಸಾವನ್ನಪ್ಪಿದ್ದಾರೆ. ಇನ್ನುಳಿದ ಗಾಯಾಳುಗಳನ್ನು ಕರ್ನೂಲು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








