Tuesday, November 17, 2026
spot_imgspot_img
spot_imgspot_img

ಮಾಗಡಿ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ

- Advertisement -
- Advertisement -

ರಾಮನಗರ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ಗಾನವಿ(20), ವೈಷ್ಣವಿ(20) ಮೃತ ವಿದ್ಯಾರ್ಥಿಗಳು. ಕುಣಿಗಲ್‌ನಲ್ಲಿ ಆ್ಯಕ್ಟಿವಿಟಿ ಕ್ಲಾಸ್‌ ಇದ್ದ ಹಿನ್ನೆಲೆ ಇಬ್ಬರು ಯುವಕರು, ನಾಲ್ವರು ಯುವತಿಯರು ಸೇರಿ ಆರು ಮಂದಿ ವಿದ್ಯಾರ್ಥಿಗಳು ಬೆಂಗಳೂರಿನಿಂದ ಕುಣಿಗಲ್‌ಗೆ ತೆರಳುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿಯಾಗಿದೆ.

ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೇ, ನಾಲ್ವರ ಸ್ಥಿತಿ ಗಂಭೀರವಾಗಿದೆ. ಈ ಪೈಕಿ ಇಬ್ಬರು ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಇನ್ನಿಬ್ಬರಿಗೆ ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಿದ್ದೆ ಮಂಪರಿನಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!