Wednesday, July 22, 2026
spot_imgspot_img
spot_imgspot_img

ಹೊಸಕೋಟೆ: ಸರಣಿ ಅಪಘಾತ; 7 ಮಂದಿ ಸ್ಥಳದಲ್ಲೇ ಸಾವು

- Advertisement -
- Advertisement -

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಏಳು ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಕ್ಯಾಂಟರ್‌-ಬೈಕ್‌-ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಂದೇ ಕಾರಿನಲ್ಲಿದ್ದ 6 ಜನ ಹಾಗೂ ಓರ್ವ ಬೈಕ್‌ ಸವಾರ ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತಕ್ಕೀಡಾದ ಕಾರು ಹೊಸಕೋಟೆಯಿಂದ ದೇವನಹಳ್ಳಿ ಮಾರ್ಗವಾಗಿ ಬರುತ್ತಿತ್ತು. ಕಾರಿನಲ್ಲಿದ್ದ 6 ಜನ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಸದ್ಯ ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ವತ್ರೆಗೆ ರವಾನಿಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!