Friday, July 24, 2026
spot_imgspot_img
spot_imgspot_img

ಹೊಸಪೇಟೆ‌: ಆಸ್ಪತ್ರೆಯಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಆಸ್ಪತ್ರೆ ಸಿಬ್ಬಂದಿಯ ಬಂಧನ

- Advertisement -
- Advertisement -

ವಿಜಯನಗರ: ಜಿಲ್ಲೆಯ ಹೊಸಪೇಟೆ ನಗರದ 100 ಹಾಸಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಸಿಬ್ಬಂದಿಯಾಗಿರುವ ಅಜೇಯ್ ಅಲಿಯಾಸ್ ಅಜ್ಜಯ್ಯ ಎಂಬಾತನನ್ನು ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಮೇ 5 ರಂದು ರಾತ್ರಿ 10 ಗಂಟೆಯ ನಂತರ ಈ ಘಟನೆ ನಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

ಚಿಕಿತ್ಸೆಗೆಂದು ತನ್ನ ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಬಾಲಕಿಯನ್ನು ಆರೋಪಿಯು ಪುಸಲಾಯಿಸಿ ಆಸ್ಪತ್ರೆಯ ವಸತಿ ಗೃಹಕ್ಕೆ ಕರೆದುಕೊಂಡು ಹೋಗಿದ್ದು, ಬಳಿಕ ನಶೆ ಬರುವ ರೀತಿಯ ಯಾವುದೋ ಜ್ಯೂಸ್ ನೀಡಿದ ನಂತರ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.

ಈ ಕುರಿತು ನೀಡಲಾದ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!