Sunday, June 29, 2025
spot_imgspot_img
spot_imgspot_img

ಹೊಸಪೇಟೆ: ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದ ಕೊಲೆ ಪ್ರಕರಣ: ಆರೋಪಿ ಬಂಧನ

- Advertisement -
- Advertisement -

ಹೊಸಪೇಟೆ: ಏಳು ವರ್ಷದ ಬಾಲಕನನ್ನು ಅಪಹರಿಸಿ, ಎಚ್ ಎಲ್ ಸಿ ಕಾಲುವೆಗೆ ಎಸೆದು ಕೊಲೆ ಮಾಡಿರುವ ಘಟನೆ ಜಯನಗರ ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತಪಟ್ಟ ಬಾಲಕನನ್ನು ಅಭಿ (7) ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಮಲಾಪುರದ ನಿವಾಸಿ ಓಬಳೇಶ್ (24) ಎಂಬ ಯುವಕನನ್ನು ಕೊಲೆ ಆರೋಪದ ಮೇಲೆ ಪೊಲೀಸರು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.

ಅ.22ರಂದು ಬಾಲಕನನ್ನು ಶಾಲೆಯಿಂದ ಆರೋಪಿ ಅಪಹರಣ ಮಾಡಿ, ಎಚ್ ಎಲ್ ಸಿ ಕಾಲುವೆಯಲ್ಲಿ ಎಸೆದಿದ್ದಾನೆ. ಕುರೇಕುಪ್ಪದ ಬಳಿ ಕಾಲುವೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ತನ್ನ ಮಗ ಕಾಣೆಯಾಗಿದ್ದಾನೆ ಎಂದು ಬಾಲಕನ ತಾಯಿ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಬೆನ್ನುಬಿದ್ದ ಪೊಲೀಸರಿಗೆ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಈ ಬಗ್ಗೆ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!