Sunday, June 14, 2026
spot_imgspot_img
spot_imgspot_img

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನ 6 ತಿಂಗಳು ವಿಸ್ತರಿಸಲು ಸದನದಲ್ಲಿ ಅನುಮೋದನೆ..!

- Advertisement -
- Advertisement -

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ.

ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕುರಿತಂತೆ ಮಂಡಿಸಿದ ಪ್ರಸ್ತಾವನೆಯನ್ನ ಸದನವು ಅಂಗೀಕರಿಸಿದೆ. ಆಗಸ್ಟ್ 13ರಿಂದ ಅನ್ವಯವಾಗುವಂತೆ 6 ತಿಂಗಳ ಕಾಲ ರಾಷ್ಟ್ರಪತಿ ಆಡಳಿತ ವಿಸ್ತರಣೆಯಾಗಲಿದೆ.

ಮಣಿಪುರಕ್ಕೆ ಸಂಬಂಧಿಸಿದಂತೆ ಸಂವಿಧಾನದ 356ನೇ ವಿಧಿ ಅನ್ವಯ 2025ರ ಫೆಬ್ರವರಿ 13ರಂದು ರಾಷ್ಟ್ರಪತಿಗಳು ನೀಡಿದ ಸುಗ್ರೀವಾಜ್ಞೆಯನ್ನ 2025ರ ಆಗಸ್ಟ್ 13ರಿಂದ ಆರು ತಿಂಗಳ ಕಾಲ ಮುಂದುವರಿಸಲು ಸದನ ಒಪ್ಪಿಗೆ ನೀಡಬೇಕಿದೆ ಎಂದು ಸದನದಲ್ಲಿ ಮಂಡಿಸಲಾದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!