Tuesday, June 9, 2026
spot_imgspot_img
spot_imgspot_img

ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಗೆ ಚೂರಿ ಇರಿತ ಪ್ರಕರಣ : ಆರೋಪಿ ಬಂಧನ

- Advertisement -
- Advertisement -

ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪುದು ಗ್ರಾಮ, ಬಂಟ್ವಾಳದಲ್ಲಿ ನಿನ್ನೆ ನಡೆದಿದ್ದು,ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಅಬ್ದುಲ್ ರಹಿಮಾನ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ನಿವಾಸಿ ಮಹಮ್ಮದ್ ರಮೀಜ್ ಎಂಬಾತನಿಗೆ ಮನೆಗೆ ನುಗ್ಗಿ ಚೂರಿಯಿಂದ ಇರಿಯಲಾಗಿತ್ತು.
ಅಬ್ದುಲ್ ರಹಿಮಾನ್ ಎಂಬಾತ ಚೂರಿ ಇರಿದು ಪರಾರಿಯಾಗಿದ್ದು, ಬಳಿಕ ಈತನಿಗಾಗಿ ಪೋಲೀಸ್ ತಂಡ ಹುಡುಕಾಟ ನಡೆಸುತ್ತಿತ್ತು. ಇದೀಗ ಆರೋಪಿಯನ್ನು ಪೋಲೀಸರು ಪರಂಗಿಪೇಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Related news

error: Content is protected !!