- Advertisement -
- Advertisement -
ವಿಟ್ಲ: ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ನಿವಾಸಿ, 31 ವರ್ಷದ ಯುವಕನ 50 ವರ್ಷದ ಸಹೋದರನಿಗೂ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ಮನೆಯನ್ನು ವಿಟ್ಲ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸೀಲ್ ಡೌನ್ ಮಾಡಿದರು.
ಕೆಲವು ದಿನಗಳ ಹಿಂದೆ ಒಕ್ಕೆತ್ತೂರು ನಿವಾಸಿ, ಮೂರು ತಿಂಗಳ ಹಿಂದೆ ವಿದೇಶದಿಂದ ಆಗಮಿಸಿದ್ದ ಯುವಕನಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಮನೆಯನ್ನು ಸೀಲ್ ಡೌನ್ ಮಾಡಲಾಗಿತ್ತು.
ಶನಿವಾರ ಯುವಕನ ಸಹೋದರ ಒಕ್ಕೆತ್ತೂರು ಕೊಡಂಗೆ ಊರ್ದಂಗಡಿ ನಿವಾಸಿ 50 ವರ್ಷದ ವ್ಯಕ್ತಿಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ಗ್ರಾಮ ಕರಣಿಕ ಪ್ರಕಾಶ್ ಮತ್ತು ಸಿಬ್ಬಂದಿಗಳು ಊರ್ದಂಗಡಿಯಲ್ಲಿರುವ ಸೋಂಕಿತನ ಮನೆಯನ್ನು ಸೀಲ್ ಡೌನ್ ಮಾಡಿದರು.
- Advertisement -