Saturday, June 28, 2025
spot_imgspot_img
spot_imgspot_img

ಭಾರೀ ಮಳೆಗೆ ಮನೆ ಗೋಡೆ ಕುಸಿತ: ಮಹಿಳೆ ಮೃತ್ಯು

- Advertisement -
- Advertisement -

ಭಾರೀ ಮಳೆಗೆ ಮನೆಯೊಂದರ ಗೋಡೆ ಕುಸಿದು ಮಹಿಳೆಯೋರ್ವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆ ಸಹನಾ(27) ಎಂದು ಗುರುತಿಸಲಾಗಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒದ್ದೆಯಾಗಿದ್ದ ಹಳೆ ಮನೆಯ ಗೋಡೆ ಏಕಾಏಕಿ ಕುಸಿದು ಬಿದ್ದಿದ್ದು ಈ ಸಂದರ್ಭದಲ್ಲಿ ಸಹನಾ ಸ್ನಾನ ಮಾಡುವ ನಿಟ್ಟಿನಲ್ಲಿ ತಮ್ಮ ಹಳೆಯ ಮನೆ ಬಳಿ ತೆರಳಿದ್ದು, ಕುಸಿದು ಬಿದ್ದ ಗೋಡೆಯ ಮಣ್ಣಿನಡಿ ಸಿಲುಕಿದ್ದಾಳೆ ಎಂದು ತಿಳಿದು ಬಂದಿದೆ.

ಕೂಡಲೇ ಸ್ಥಳೀಯರು ಧಾವಿಸಿ ಮಣ್ಣಿನಡಿ ಸಿಲುಕಿದ್ದ ಸಹನಾಳನ್ನು ಹೊರತೆಗೆದಿದ್ದು ಗುಬ್ಬಿ ತಾಲ್ಲೂಕಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅದಾಗಲೇ ಸಹನಾ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಗುಬ್ಬಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!