Wednesday, April 23, 2025
spot_imgspot_img
spot_imgspot_img

ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಬದಲಾವಣೆಗೆ ಮಾರ್ಚ್ 31ರವರೆಗೆ ಗಡುವು ವಿಸ್ತರಣೆ!

- Advertisement -
- Advertisement -

ಬೆಂಗಳೂರು : ಎಚ್‌ಎಸ್‌ಆರ್‌ಪಿ ನಂಬ‌ರ್ ಪ್ಲೇಟ್ ಅಳವಡಿಕೆ ಗಡುವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್ 1, 2019ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಆಗಸ್ಟ್ 17, 2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಇನ್ನೂ ಬಹಳಷ್ಟು ವಾಹನ ಸವಾರರು ಎಚ್‌ಎಸ್‌ಆರ್‌ಪಿ ನಂಬ‌ರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್ 31, 2025ರವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿದ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.

ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್ 50 ಹಾಗೂ 51ರನ್ವಯ ಎಲ್ಲ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್ ಪ್ಲೇಟ್‌ಗಳನ್ನು ಅಳವಡಿಕೆ ಮಾಡಬೇಕಿದೆ. ಕರ್ನಾಟಕದ ವಾಹಗಳಿಗೆ ಈ ನಿಯಮವನ್ನು ಕಡ್ಡಾಯ ಮಾಡಲಾಗಿದೆ.ಇದರ ಮೇಲೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ.

- Advertisement -

Related news

error: Content is protected !!