- Advertisement -
- Advertisement -
ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾನಗರದ ಶಿರೂರು ಪಾರ್ಕ್ ನಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಳೆದ ಹದಿನೆಂಟು ವರ್ಷಗಳಿಂದ ನಿರಂತರವಾಗಿ ಅನ್ನ ಸಂತರ್ಪಣೆ ಮಾಡುತ್ತಿರುವ ಪ್ರಸಾದ್ ಶೆಟ್ಟಿ ಮತ್ತು ಪ್ರಶಾಂತ್ ಶೆಟ್ಟಿ ಸಹೋದರರು ಈ ವರ್ಷವೂ ಪೂಜಾ ಕಾರ್ಯಕ್ರಮ ಹಾಗೂ ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಸುಮಾರು ಹತ್ತು ಸಾವಿರ ಜನರಿಗೆ ಈ ವರ್ಷ ಅನ್ನಸಂತರ್ಪಣೆ ನೆರವೇರಿತು. ಆನಂದ್ ಗುರುಸ್ವಾಮಿ, ಪ್ರಸಾದ್ ಶೆಟ್ಟಿ, ಪ್ರಶಾಂತ್ ಶೆಟ್ಟಿ,ರಿತೇಶ್ ತಾತುಸ್ಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


- Advertisement -