Friday, April 19, 2024
spot_imgspot_img
spot_imgspot_img

ಯುವತಿ ಮೇಲೆ ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಹಲ್ಲೆ!

- Advertisement -G L Acharya panikkar
- Advertisement -

ಹುಬ್ಬಳ್ಳಿ: ಯುವತಿಯೊಬ್ಬಳ ಮೇಲೆ ಹುಬ್ಬಳ್ಳಿಯ ಜನ ನಿಬಿಡ ಪ್ರದೇಶದಲ್ಲಿ ಮಚ್ಚಿನಿಂದ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಈ ಕೃತ್ಯ ನಡೆದಿದೆ.

ಎಲ್ಲರೂ ನೋಡುತ್ತಿದ್ದಂತೆ ಮುಸುಕು ಧರಿಸಿದ ಯುವಕನೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಯುವತಿಗೆ ಗಂಭೀರವಾಗಿ ಗಾಯಗಳಾಗಿವೆ.

ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಆರೋಪಿಯ ಬಗ್ಗೆ ಮಾಹಿತಿ ಬಹಿರಂಗಪಡಿಸಿಲ್ಲ. ಯುವತಿ ಯುವಕನ ಪ್ರೀತಿ ಪ್ರಸ್ತಾಪ ನಿರಾಕರಿಸಿದ್ದಕ್ಕಾಗಿ ಈ ಕೃತ್ಯ ಎಸಗಲಾಗಿದೆ ಎಂದು ಶಂಕಿಸಲಾಗಿದೆ.

- Advertisement -

Related news

error: Content is protected !!