Tuesday, April 16, 2024
spot_imgspot_img
spot_imgspot_img

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ“ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ-ಹುಬ್ಬಳ್ಳಿ” ಎಂದು ನಾಮಕರಣ.

- Advertisement -G L Acharya panikkar
- Advertisement -

ಹುಬ್ಬಳ್ಳಿ: ಕರ್ನಾಟಕದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾದ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಶ್ರೀಸಿದ್ದಾರೂಢ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡಲು ಕೇಂದ್ರ ಗೃಹ ಇಲಾಖೆ ಆದೇಶಿಸಿದೆ. ಈ ಸಂಬಂಧ ಕೇಂದ್ರವು ರಾಜ್ಯದ ಕಂದಾಯ ಇಲಾಖೆಗೆ ಪತ್ರ ಕಳಿಸಿದೆ.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಈ ಕುರಿತು ಟ್ವಿಟ್ ಮಾಡಿದ್ದು, ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿ‌ ಎಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಗೃಹ ಸಚಿವ ಅಮಿತ್ ಶಾ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಧನ್ಯವಾದ ಎಂದು ಬರೆದಿದ್ದಾರೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣವನ್ನು “ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ-ಹುಬ್ಬಳ್ಳಿ” ಎಂದು ನಾಮಕರಣ ಮಾಡುವ ಮುಖಾಂತರ ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಈ ಸಂದರ್ಭದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿಯವರಿಗೆ, ಗೃಹ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ರವರಿಗೆ, ಕೇಂದ್ರ ರೈಲ್ವೆ ಸಚಿವರಾದ ಶ್ರೀ ಪಿಯೂಶ್ ಗೋಯಲ್ ಹಾಗೂ ರೈಲ್ವೆ ರಾಜ್ಯ ಸಚಿವರಾದ ಶ್ರೀ ಸುರೇಶ್ ಅಂಗಡಿಯವರಿಗೆ ಮಾನ್ಯ ಮುಖ್ಯಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

ನಮ್ಮೆಲ್ಲರ ಆರಾಧ್ಯ ದೈವ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿ ಅವರ  ಆಶೀರ್ವಾದದಿಂದ ಹುಬ್ಬಳ್ಳಿ ಜನರ ಬಹಳ ದಿನದ ಬೇಡಿಕೆಯಂತೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ಧಾರೂಡ ಸ್ವಾಮೀಜಿ ರೈಲ್ವೆ ನಿಲ್ದಾಣವೆಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ನಾನು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಪಿಯೂಷ್ ಗೋಯಲ್ ಮತ್ತು ಸುರೇಶ ಅಂಗಡಿ  ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ‌.

ಹುಬ್ಬಳ್ಳಿ ಜನರ ಬಹಳ ದಿನದ ಬೇಡಿಕೆಯಂತೆ ಹುಬ್ಬಳ್ಳಿಯ ರೇಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ಧಾರೂಡ ಸ್ವಾಮಿಜಿ ರೇಲ್ವೆ ನಿಲ್ದಾಣವೆಂದು ನಾಮಕರಣ ಮಾಡಲು…

Posted by Pralhad Joshi on Wednesday, 9 September 2020
- Advertisement -

Related news

error: Content is protected !!