Thursday, May 2, 2024
spot_imgspot_img
spot_imgspot_img

ಪತ್ನಿಯನ್ನು ರಸ್ತೆಯಲ್ಲಿ ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆಗೈದ ಪತಿ; ವಿಡಿಯೋ ವೈರಲ್‌

- Advertisement -G L Acharya panikkar
- Advertisement -
vtv vitla

ಸಾರ್ವಜನಿಕರ ಎದುರೇ ಪತಿಯನ್ನು ರಸ್ತೆ ತುಂಬಾ ಅಟ್ಟಾಡಿಸಿ ಮನಬಂದಂತೆ ರಾಡ್, ಮಚ್ಚಿನಿಂದ ಹಲ್ಲೆ ನಡೆಸಿದ್ದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ. ಪತಿ ಶ್ರೀನಿವಾಸ್ ಎಂಬಾತ ತನ್ನ ಪತ್ನಿ ಸವಿತಾಳ ಹಲ್ಲೆ ನಡೆಸಿದ್ದಾನೆ. ಪತ್ನಿ ಮೇಲೆ ಪತಿ ಅಮಾನುಷವಾಗಿ ಹಲ್ಲೆ ಮಾಡುವ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದೆ.

18 ವರ್ಷಗಳ ಹಿಂದೆ ವಿವಾಹವಾಗಿದ್ದ ಶ್ರೀನಿವಾಸ್ ಹಾಗೂ ಸವಿತಾ ಕಳೆದ ಎರಡು ವರ್ಷಗಳಿಂದ ಒಂದೇ ಮನೆಯಲ್ಲಿ ವಿಭಾಗ ಮಾಡಿಕೊಂಡು ವಾಸ ಮಾಡುತ್ತಿದ್ದರು. ಪತಿಯಿಂದ ವಿಚ್ಛೇದನಕ್ಕಾಗಿ ಕಾನೂನು ಹೋರಾಟ ನಡೆಸುತ್ತಿರುವ ಸವಿತಾ ಆಸ್ತಿ ವಿಭಾಗಕ್ಕೂ ಪತಿ ಮೇಲೆ ಕೇಸ್ ಹಾಕಿದ್ದಳು. ಶನಿವಾರ ಸಂಜೆ ಸೈಟ್ ಸೇಲ್ ಸಂಬಂಧ ಸವಿತಾ ಜೊತೆ ಶ್ರೀನಿವಾಸ್ ಜಗಳ ಮಾಡಿದ್ದಾನೆ. ಈ ವೇಳೆ ಎದುರು ಮಾತನಾಡಿದ ಪತ್ನಿ ಮೇಲೆ ಮಚ್ಚು ಹಾಗೂ ರಾಡ್‍ನಿಂದ ಹಲ್ಲೆ ಮಾಡಿದ್ದಾನೆ. ಪತಿಯ ಹಲ್ಲೆಯಿಂದ ತಪ್ಪಿಸಿಕೊಂಡು ಓಡಿದರೂ ಬಿಡದೆ ಮಚ್ಚಿನಿಂದ ಅಮಾನುಷವಾಗಿ ಹಲ್ಲೆಗೈದಿದ್ದಾನೆ. ಅಲ್ಲದೆ ಪತ್ನಿ ಸವಿತಾ ತಂಗಿ ಅನಿತಾ ಕಾರಿನ ಮೇಲೂ ದಾಳಿ ಮಾಡಿ ಗ್ಲಾಸ್ ಪುಡಿ ಪುಡಿ ಮಾಡಿದ್ದಾನೆ.

ಸದ್ಯ ಗಾಯಾಳು ಸವಿತಾಗೆ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಗೆ ಮಚ್ಚು ನೀಡಿದ ಶ್ರೀನಿವಾಸ್ ಸಂಬಂಧಿಯನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಶ್ರೀನಿವಾಸ್ ಬಂಧನಕ್ಕೆ ಪೊಲೀಸರು ಎರಡು ತಂಡ ರಚಿಸಿದ್ದಾರೆ. ಘಟನೆ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!