Wednesday, June 17, 2026
spot_imgspot_img
spot_imgspot_img

ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದು ಪತಿ ಆತ್ಮಹತ್ಯೆ..!

- Advertisement -
- Advertisement -

ಕಲಬುರಗಿ: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗಾಬರೆ ಲೇಔಟ್‌ನ ಅಪಾರ್ಟ್‌ಮೆಂಟ್ ವೊಂದರಲ್ಲಿ ನಡೆದಿದೆ.

ಸಂತೋಷ್ ಕೊರಳಿ(45), ಶೃತಿ ( 35), ಮಕ್ಕಳಾದ ಮುನಿಶ್ (9) ಹಾಗು ಮೂರು ತಿಂಗಳ ಮಗು ಅನಿಶ್ ಮೃತರು ಎಂದು ಗುರುತಿಸಲಾಗಿದೆ.

ಪತ್ನಿ ಹಾಗು ಮಕ್ಕಳನ್ನು ಕೊಲೆ ಮಾಡಿ ನಂತರ ಪತಿ ಸಹ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಲಬುರಗಿಯ ಸ್ಟೇಷನ್‌ ಬಜಾ‌ರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!