Thursday, June 18, 2026
spot_imgspot_img
spot_imgspot_img

ಹೆಂಡತಿ ಸಮಾಧಿ ಮುಂದೆ ಗಂಡ ನೇಣಿಗೆ ಶರಣು..!

- Advertisement -
- Advertisement -

ಹೆಂಡತಿ ಸಮಾಧಿಗೆ ಪೂಜೆ ಮಾಡಿ ಆಕೆಯ ಸಮಾಧಿ ಎದುರೇ ಗಂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೊರವಲಯದ ತೀಮಾಕಲಪಲ್ಲಿ ಸ್ಮಶಾನದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಗರದ 16ನೇ ವಾರ್ಡ್ ನಿವಾಸಿ ಗುರುಮೂರ್ತಿ ಅಲಿಯಾಸ್ ಲೆಗ್ ಹಾಗೂ ಪತ್ನಿ ಮೌನಿಕಾ ಎಂದು ಗುರುತಿಸಲಾಗಿದೆ.

ಇವರು ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ಕಳೆದ ವರ್ಷ ಪತ್ನಿ ಮೌನಿಕಾ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಗುರುಮೂರ್ತಿ ಕೂಡಾ ಹೆಂಡತಿ ಸಾವಿನ ನೋವಲ್ಲೇ ಮಾನಸಿಕ ಕಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ವಾಕಿಂಗ್ ಹೋಗಿ ಬರುವುದಾಗಿ ಹೇಳಿ ಹೋಗಿರುವ ಗುರುಮೂರ್ತಿ ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ತದನಂತರ ಅಲ್ಲೇ ಇದ್ದ ಮರಕ್ಕೆ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!