Wednesday, June 17, 2026
spot_imgspot_img
spot_imgspot_img

ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಲೆಗೈದ ಪತಿರಾಯ..!

- Advertisement -
- Advertisement -

ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಪದ್ಮಾಕ್ಷಿ (40) ಮೃತ ದುರ್ದೈವಿ.

ಪದ್ಮಾಕ್ಷಿ ತನ್ನ ಮನೆಯ ಮುಂಭಾಗದಲ್ಲಿ ಬಿದ್ದಿದ್ದು, ಇಂದು ಬೆಳಿಗ್ಗೆ ಅಕ್ಕಪಕ್ಕದ ಮನೆಯವರು ಇದನ್ನು ಗಮನಿಸಿ ಪರಿಶೀಲಿಸಿದಾಗ ಆಕೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆಕೆಯ ಪತಿ ಚಂದ್ರು ಮನೆಯೊಳಗೆ ಮಲಗಿರುವುದು ಕಂಡು ಬಂದಿತ್ತು. ಪತಿ ಚಂದ್ರು ಕುಡಿದ ಮತ್ತಿನಲ್ಲಿ ತನ್ನ ಪತ್ನಿಯನ್ನು ಕೊಡಲಿಯಿಂದ ಹೊಡೆದು ಮನೆಯಿಂದ ಹೊರ ತಳ್ಳಿದ್ದಾನೆ.

ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಮಗಳು ವಿದ್ಯಾಭ್ಯಾಸ ಮೊಟಕುಗೊಳಿಸಿ ಮನೆಯಲ್ಲಿಯೇ ಇದ್ದು, ಇನ್ನೋರ್ವ ಮಗಳು ಬೇಲೂರು ಹಾಸ್ಟೆಲ್ ನಲ್ಲಿ ಇದ್ದುಕೊಂಡು ಹೈಸ್ಕೂಲ್ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದುಬಂದಿದೆ. ನಿನ್ನೆ ಮಗಳು ಸಂಬಂಧಿಕರ ಮನೆಗೆ ತೆರಳಿದ್ದಳು ಮನೆಯಲ್ಲಿ ಗಂಡ ಹೆಂಡತಿ ಇಬ್ಬರೇ ಇದ್ದರು ಎನ್ನಲಾಗಿದೆ. ಗೋಣಿಬೀಡು ಪೊಲೀಸರ ಭೇಟಿ ನೀಡಿ ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.

- Advertisement -

Related news

error: Content is protected !!