Saturday, April 27, 2024
spot_imgspot_img
spot_imgspot_img

ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ಹಾಗೂ ಆರು ವರ್ಷದ ಮಗು ನಿಗೂಢ ಸಾವು

- Advertisement -G L Acharya panikkar
- Advertisement -

ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ಸೇರಿದಂತೆ ಆರು ವರ್ಷದ ಮಗು ಅಮೆರಿಕದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್​ನಲ್ಲಿ ಸಾವನ್ನಪ್ಪಿದ್ದಾರೆ.

ಅಮೆರಿಕದಲ್ಲಿ ದಾವಣಗೆರೆ ದ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ದಂಪತಿ ಹಾಗೂ ಪುತ್ರ ಸಾವನ್ನಪ್ಪಿರುವಂತಹ ಘಟನೆ ಅಮೇರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್​ನಲ್ಲಿ ನಡೆದಿದೆ. ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಮೃತರು. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ನಿವಾಸಿಗಳಾದ ಇವರು ಕಳೆದ 9 ವರ್ಷಗಳಿಂದ ಅಮೆರಿಕದಲ್ಲಿ ವಾಸವಾಗಿದ್ದು, ಯೋಗೇಶ್​, ಪ್ರತಿಭಾ ಇಬ್ಬರೂ ವೃತ್ತಿಯಲ್ಲಿ ಇಂಜಿನಿಯರ್​ ಆಗಿದ್ದರು. ಈ ಮೂವರ ಸಾವು ನಿಗೂಢವಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಸಾವಿಗೆ ನಿಖರ ಕಾರಣ ತಿಳಿಸಿ ಮೃತದೇಹ ತರಿಸಿಕೊಡುವಂತೆ ಮೃತ ಯೋಗೇಶ್ ತಾಯಿ ಶೋಭಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

- Advertisement -

Related news

error: Content is protected !!