Monday, May 6, 2024
spot_imgspot_img
spot_imgspot_img

ಪತಿ, ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ

- Advertisement -G L Acharya panikkar
- Advertisement -

ಪತಿ, ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಡಿಕೇರಿ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ರಾಧಿಕ (40) ಮೃತ ಮಹಿಳೆಯಾಗಿದ್ದು, ಇದೇ ರಾಜ್ಯದ ಪತಿ ರೋಷನ್ (30) ಬಂಧಿತ ಆರೋಪಿಯಾಗಿದ್ದಾನೆ.

ನಗರದ ಖಾಸಗಿ ವಸತಿಗೃಹದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಕೈಗಾರಿಕಾ ಬಡಾವಣೆಯಲ್ಲಿ ವಾಸಿಸುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಕಲಹ ಏರ್ಪಟ್ಟು ಪತಿ ರೋಷನ್ ರಾಧಿಕಾಳ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ತೀವ್ರ ರಕ್ತಸ್ರಾವಗೊಂಡ ಮಹಿಳೆಯನ್ನು ನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಆರೋಪಿ ರೋಷನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!