




ಹೈದರಾಬಾದ್: ಕೌಟುಂಬಿಕ ವಿವಾದದಿಂದ ಬೇಸತ್ತ ಸುಷ್ಮಾ(27), ತನ್ನ 10 ತಿಂಗಳ ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ಸುಷ್ಮಾ ನಾಲ್ಕು ವರ್ಷಗಳ ಹಿಂದೆ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಯಶವಂತ್ ರೆಡ್ಡಿ ಎಂಬುವರನ್ನು ವಿವಾಹವಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಂಪತಿ ಜಗಳವಾಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ಸುಷ್ಮಾ ಕಾರ್ಯಕ್ರಮವೊಂದಕ್ಕೆ ಸಂಬಂಧಿಸಿದಂತೆ ಶಾಪಿಂಗ್‌ಗಾಗಿ ತನ್ನ ತಾಯಿಯ ಮನೆಗೆ ಹೋಗಿದ್ದರು. ಈ ವೇಳೆ ತನ್ನ ಮಗುವಿನೊಂದಿಗೆ ಕೋಣೆಗೆ ಹೋಗಿ, ಮಗುವಿಗೆ ವಿಷ ನೀಡಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಕೆಲಸ ಮುಗಿಸಿ ಮನೆಗೆ ಬಂದು ರೂಮ್ ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು, ಬಾಗಿಲು ಒಡೆದು ನೋಡಿದ ವೇಳೆ ಹೆಂಡತಿ ಮತ್ತು ಮಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಗೊತ್ತಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿ, ವೈದ್ಯರು ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ತನ್ನ ಮಗಳು ಮತ್ತು ಮೊಮ್ಮಗ ಸತ್ತಿರುವುದನ್ನು ನೋಡಿದ ಲಲಿತಾ ಆಘಾತವನ್ನು ಸಹಿಸಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ ಸಂದರ್ಭ ಕುಟುಂಬದ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.








