Saturday, June 28, 2025
spot_imgspot_img
spot_imgspot_img

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ; ಸರ್ಕಾರದಿಂದ ಹೊಸ ಆದೇಶ

- Advertisement -
- Advertisement -

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಆದೇಶದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪರ ಹಾಗೂ ವಿರೋಧ ಚರ್ಚೆಗಳು ನಡೆಯುತ್ತಿದೆ.

ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ಸರ್ಕಾರ ವಿನಾಯಿತಿ ನೀಡಿದೆ. ಸರ್ಕಾರಿ ಶಾಲೆಗಳು ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಕಡ್ಡಾಯವಾಗಿ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.

ಈ ಮೊದಲು ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡುವ ಮೂಲಕ ನಾಡಗೀತೆಗೆ ಗೌರವ ಸಲ್ಲಿಸಲಾಗುತ್ತಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳಲ್ಲಿಯೂ ನಾಡಗೀತೆ ಹಾಡುವುದು ಕಡ್ಡಾಯವಾಗಿತ್ತು. ಆದರೆ ಈಗ ಏಕಾಏಕಿ ರಾಜ್ಯ ಸರ್ಕಾರ ಹಳೆಯ ಆದೇಶವನ್ನು ಬದಲಾವಣೆ ಮಾಡಿ ಹೊಸ ಆದೇಶವನ್ನು ಜಾರಿ ಮಾಡಿದೆ.

- Advertisement -

Related news

error: Content is protected !!