Saturday, July 25, 2026
spot_imgspot_img
spot_imgspot_img

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದ್ರು. ನಾನು ಬಹಳ ವಿನಮ್ರವಾಗಿ ಆಗಲ್ಲ ಅಂತ ಹೇಳಿದೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಅಂತ ಹೇಳಿದ್ದೇನೆಂದು ತಿಳಿಸಿದರು.

ರಾಜ್ಯದ ಜನ ಆಯ್ಕೆ ಮಾಡಿರುವುದು ಐದು ವರ್ಷಕ್ಕೆ ಇನ್ನೂ ಎರಡು ವರ್ಷ ಇದೆ. ಅಲ್ಲಿವರೆಗೆ ಕರ್ನಾಟಕ ಹಾಗೂ ನನ್ನ ಕ್ಷೇತ್ರದ ಜನತೆ ಪರವಾಗಿ ಕೆಲಸ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

- Advertisement -

Related news

error: Content is protected !!