Tuesday, July 21, 2026
spot_imgspot_img
spot_imgspot_img

ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು

- Advertisement -
- Advertisement -

ಕಲಬುರಗಿ: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ. ನ.25ರಂದು ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.


ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ (KA 04, NC 7982) ನಂಬರಿನ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.



ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್ ಬೀಳಗಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಐಜಿಪಿ ಶಾಂತನು ಸಿನ್ಹಾ, ಕಲಬುರಗಿ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ‌ದೌಡಾಯಿಸಿದ್ದಾರೆ.



ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಬೆಸ್ಕಾಂ ಎಂಡಿ ಕೂಡ ಆಗಿದ್ದರಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕರ್ತವ್ಯ ನಿರ್ವಹಿಸಿದ್ದರು.

- Advertisement -

Related news

error: Content is protected !!