Sunday, May 5, 2024
spot_imgspot_img
spot_imgspot_img

ಮನಿ ಲಾಂಡ್ರಿಂಗ್ ಪ್ರಕರಣ-‘ಇಡಿ’ ಮತ್ತೆ ಅಖಾಡಕ್ಕೆ!

- Advertisement -G L Acharya panikkar
- Advertisement -

ನವದೆಹಲಿ: ಮನಿ ಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಸಹೋದರರು ಹಾಗೂ ಆಪ್ತರನ್ನು ವಿಚಾರಣೆಗೊಳಪಡಿಸುವಂತೆ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ.
ಡಿಕೆಶಿ ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸುವ ಸಂಬಂಧ ದಿನಾಂಕ ಮತ್ತು ಸಮಯ ನಿಗದಿ ಮಾಡುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಸೂಚನೆ ನೀಡಿದೆ.


ಈ ಹಿನ್ನೆಲೆಯಲ್ಲಿ ಡಿಕೆಶಿ ಆಪ್ತರು ಮತ್ತು ಬಂಧುಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ ಸಿದ್ಧತೆ ನಡೆಸಿದ್ದು, ನವೆಂಬರ್ 19ಕ್ಕೆ ಮುಂದಿನ ವಿಚಾರಣೆ ನಿಗದಿಯಾಗಿದೆ.


ಮನಿ ಲಾಂಡ್ರಿಂಗ್ ಪ್ರಕರಣದ ತನಿಖೆಯ ಭಾಗವಾಗಿ ವಿಚಾರಣೆಗೆ ಹಾಜರಾಗಬೇಕು ಎಂದು 7 ಮಂದಿಗೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಈ ಹಂತದಲ್ಲಿ ಖುದ್ದು ಹಾಜರಾತಿ ಸಾಧ್ಯವಿಲ್ಲ ಎಂದು ರಾಜೇಶ್, ಗಂಗಾಶರಣ್, ಜಯಶೀಲಾ, ಚಂದ್ರ, ಲಕ್ಷ್ಮಮ್ಮ, ಮೀನಾಕ್ಷಿ ಮತ್ತು ಹನುಮಂತರಾಯಪ್ಪ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಅವಕಾಶ ನೀಡಿ ಆದೇಶ ನೀಡಿದೆ.
ಇತ್ತೀಚೆಗಷ್ಟೇ ಸಿಬಿಐ ಡಿಕೆಶಿ ಸೋದರರ ಬೆಂಗಳೂರಿನ ನಿವಾಸ ಸೇರಿದಂತೆ 14 ಕಡೆ ದಾಳಿ ನಡೆಸಿತ್ತು. ಇದೀಗ ಜಾರಿ ನಿರ್ದೇಶನಾಲಯ ಮತ್ತೆ ಅಖಾಡಕ್ಕೆ ಇಳಿದಿದೆ.

- Advertisement -

Related news

error: Content is protected !!