Monday, June 8, 2026
spot_imgspot_img
spot_imgspot_img

ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಅಕ್ರಮವಾಗಿ ಡ್ರೋಣ್ ಹಾರಾಟ..!

- Advertisement -
- Advertisement -

ನವದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮನೆ ಮೇಲೆ ಅಕ್ರಮವಾಗಿ ಡ್ರೋಣ್ ಹಾರಾಟ ನಡೆಸಲಾಗಿದ್ದು, ಇದೀಗ ದೆಹಲಿ ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದಾರೆ.

ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿಗಳ ನಿವಾಸದ ಮೇಲೆ ಡ್ರೋಣ್ ಹಾರಾಟ ನಡೆಸಿರುವುದನ್ನು ಮೋದಿ ಭದ್ರತೆಗಾಗಿ ನಿಯೋಜನೆಗೊಂಡಿರುವ ವಿಶೇಷ ರಕ್ಷಣಾ ದಳದ ಅಧಿಕಾರಿಗಳು ಗಮನಿಸಿದ್ದಾರೆ.

ಕೂಡಲೇ ದೆಹಲಿ ಪೊಲೀಸರು ಶೋಧಕ್ಕೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ, ಇದೂವರೆಗೆ ಯಾವುದೇ ಡ್ರೋಣ್ ಪತ್ತೆಯಾಗಿಲ್ಲ ಎಂದು ತಿಳಿದಬಂದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸವು ನೋ ಫ್ಲೈ ಝೋನ್ ಅಥವಾ ಡ್ರೋಣ್ ಝೋನ್ ಅಡಿಯಲ್ಲಿ ಬರುತ್ತದೆ.

- Advertisement -

Related news

error: Content is protected !!