Thursday, June 25, 2026
spot_imgspot_img
spot_imgspot_img

ಮಂಗಳೂರು: ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟ- 5,52,678 ರೂ. ಕರೆನ್ಸಿ ಸಹಿತ ಆರೋಪಿಯ ಬಂಧನ!

- Advertisement -
- Advertisement -

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟ ನಡೆಸುತ್ತಿರುವುದು ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಮುಜಕ್ಕೀರ್ ಅಹಮ್ಮದ್ ಫಾಕ್ವಿ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯಿಂದ 5,52,678 ರೂ. ಮೌಲ್ಯದ ಕರೆನ್ಸಿ ವಶಕ್ಕೆ ಪಡೆದುಕೊಳ್ಳಲಾಗಿದೆ.

ಆರೋಪಿ ಮಂಗಳೂರಿನಿಂದ ದುಬೈಗೆ SG143 ವಿಮಾನದಲ್ಲಿ ಪ್ರಯಾಣ ಬೆಳೆಸಲು ಸಿದ್ಧತೆ ನಡೆಸುತ್ತಿದ್ದ. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಡಾಲರ್, ಕುವೈಟ್ ದಿನಾರ್ ಸೇರಿದಂತೆ ಇತರ ಕರೆನ್ಸಿಗಳನ್ನು ಆರೋಪಿಯಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಹೊಂದಿದ್ದ ಕರೆನ್ಸಿಗಳಿಗೆ ಯಾವುದೇ ದಾಖಲೆಗಳಿರಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!