Monday, May 20, 2024
spot_imgspot_img
spot_imgspot_img

ಮಂಗಳೂರು: ಅಕ್ರಮ ಚಿನ್ನ ಸಾಗಾಟ : ಲಕ್ಷಾಂತರ ರೂ. ಮೌಲ್ಯದ ಚಿನ್ನ ವಶ..!

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg
This image has an empty alt attribute; its file name is shri-energy-solar-667x1024.jpeg

ಮಂಗಳೂರು: ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೇ 5ರಂದು ಆಗಮಿಸಿದ ಪ್ರಯಾಣಿಕನೊಬ್ಬನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 40,40,220 ರೂ. ಮೌಲ್ಯದ 24 ಕ್ಯಾರಟ್‌ನ 578 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಕಾಸರಗೋಡು ಜಿಲ್ಲೆ ಮೊಗ್ರಾಲ್ ಪುತ್ತೂರು ನಿವಾಸಿಯಾಗಿರುವ ಈ ಪ್ರಯಾಣಿಕ ಅಕ್ರಮವಾಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಳ್ಳ ಸಾಗಾಟಕ್ಕೆ ಯತ್ನಿಸಿದ್ದಾನೆ. ಅನುಮಾನದ ಮೇಲೆ ಆತನನ್ನು ತಪಾಸಣೆಗೆ ಒಳಪಡಿಸಿದಾಗ ಅವನ ದೇಹದಲ್ಲಿ 3 ಅಂಡಾಕಾರದ ವಸ್ತು ಪತ್ತೆಯಾಗಿದ್ದು, ಅವುಗಳಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಾಟಕ್ಕೆ ಯತ್ನಿಸಿರುವುದು ಕಂಡು ಬಂದಿದೆ. ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!