Thursday, May 16, 2024
spot_imgspot_img
spot_imgspot_img

ಅಕ್ರಮ ಆಸ್ತಿಗಳಿಕೆ ಲೋಕಾಯುಕ್ತ ದಾಳಿ; ಡಿಕೆಶಿ ವಿರುದ್ದ ಎಫ್‌ಐಆರ್‍ ದಾಖಲು..!

- Advertisement -G L Acharya panikkar
- Advertisement -

ಡಿಸಿಎಂ ಡಿಕೆ ಶಿವಕುಮಾರ್‌ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಈಗ ಎರಡು ಸಂಸ್ಥೆಗಳು ತನಿಖೆ ನಡೆಸಲಿದೆ.

ಅಕ್ರಮ ಆಸ್ತಿ ಪ್ರಕರಣದ ತನಿಖೆಯನ್ನು ಲೋಕಾಯುಕ್ತದಿಂದ ನಡೆಸಲು ಸರ್ಕಾರ ಮುಂದಾಗಿದೆ. ಡಿಕೆ ಶಿವಕುಮಾರ್‌ ಅವರೇ ಈ ವಿಚಾರವನ್ನು ತಿಳಿಸಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಆಗಿದೆ ಎಂದು ಹೇಳಿದ್ದಾರೆ.

2013ರಿಂದ 2018ರವರೆಗೆ 74 ಕೋಟಿ ರೂ. ಅಕ್ರಮ ಆಸ್ತಿಯನ್ನು ಡಿಕೆಶಿ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು ಈಗ ಸಿಬಿಐ ತನಿಖೆ ನಡೆಸಿದ್ದು ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲು ಮಾತ್ರ ಬಾಕಿಯಿದೆ.

ಐಟಿ ಅಧಿಕಾರಿಗಳ ದಾಳಿ ವೇಳೆ ಸುಮಾರು 7.5 ಕೋಟಿ ರೂಪಾಯಿ ವಶಪಡಿಸಿಕೊಂಡಿದ್ದರು. ಮತ್ತೊಂದೆಡೆ ಐಟಿ ಅಧಿಕಾರಿಗಳು ಮಾಹಿತಿ ಆಧಾರದ ಮೇಲೆ ಜಾರಿನಿರ್ದೇಶನಾಯ-ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸಿದ್ದರು. ವಿಚಾರಣೆಯ ಸಲುವಾಗಿ ಡಿಕೆಶಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಇಡಿ ತನಿಖೆಯನ್ನು ಆಧಾರಿಸಿ ಸಿಬಿಐ ಕೂಡ ಫೀಲ್ಡ್‌ಗೆ ಇಳಿದಿತ್ತು. ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಹಿಂದಿನ ಬಿಜೆಪಿ ಸರ್ಕಾರದ ಅನುಮತಿಯನ್ನು ಕೋರಲಾಗಿತ್ತು. 2019ರ ಸೆಪ್ಟೆಂಬರ್ 15 ರಂದು ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿತ್ತು. ಸಿಬಿಐ ಅಧಿಕಾರಿಗಳು 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದೆ.

- Advertisement -

Related news

error: Content is protected !!