





ಕಡಬ: ಪೂರ್ವಾನುಮತಿ ಪಡೆಯದೆ ಜೂನ್ 1 ರ ರಾತ್ರಿ ಕಡಬ ಪೊಲೀಸ್ ಠಾಣೆಯ ಮುಂದೆ ಕಾನೂನುಬಾಹಿರ ಪ್ರತಿಭಟನೆ ನಡೆಸಿದ ಬಗ್ಗೆ ವರದಿಯಾಗಿದೆ. ಈ ಬಗ್ಗೆ 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಪ್ರಮುಖರನ್ನು
ಪರಿಶೀಲಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದು, ಮುಂಜಾಗ್ರತಾ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸಿರುತ್ತಾರೆ.
ಕಡಬ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಪ್ರಮೋದ್ ರೈ ನಂದುಗುರಿ, ತಿಲಕ್ ನಂದುಗುರಿ, ಮೋಹನ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್ ನಂದುಗುರಿ, ಉಮೇಶ್ ನೂಜಿಬಾಳ್ತಿಲ, ರಾದಾಕೃಷ್ಣ, ಕೆ, ಜಯಂತ್ ಮತ್ತು ಇತರೆ ಮೂವರ ಮೇಲೆ ಎಫ್ಐಆರ್ ದಾಖಲಾಗಿದೆ.
ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಬಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿರುವ ಬಗ್ಗೆ 15 ಮಂದಿಯ ವಿರುದ್ಧ ಕಡಬ ಪೊಲೀಸು ಠಾಣೆಯಲ್ಲಿ ಅ.ಕ್ರ: 39/2025 ಕಲಂ: 189(2),190 BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.








