- Advertisement -
- Advertisement -




ಉಳ್ಳಾಲ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಗಸ್ತು ನಿರತ ಪೊಲೀಸರು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್ ಬಳಿ ನಡೆದಿದೆ.
ಕಲ್ಲಾಪು ಪಟ್ಟ ಎಂಬಲ್ಲಿ ನದಿ ಕಿನಾರೆಯಿಂದ ಮರಳನ್ನು ಕಳ್ಳತನ ಮಾಡಿ ಚಾಲಕ ಈಚರ್ ಟಿಪ್ಪರ್ ಲಾರಿ ವಾಹನದಲ್ಲಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ
ಸಂದರ್ಭ ಕೋಟೆಕಾರ್ ನಲ್ಲಿ ಕರ್ತವ್ಯ ದಲ್ಲಿದ್ದ ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸರು ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ವೇಳೆ ಚಾಲಕ ಲಾರಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಪೊಲೀಸರು ಟಿಪ್ಪರ್ ಲಾರಿ ಸಹಿತ ಮರಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -