Wednesday, December 11, 2024
spot_imgspot_img
spot_imgspot_img

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಬಂಧನ ಪ್ರಕರಣ: ಆರೋಪಿಯ ಬಿಡುಗಡೆಗೆ ಒತ್ತಡ ಹಾಕಿ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್.ಐ.ಆರ್. ದಾಖಲು

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಪ್ರಮೋದ್‌ ಉಜಿರೆ ಹಾಗೂ ಶಶಿರಾಜ್‌ ಶೆಟ್ಟಿ (35) ಎಂಬವರುಗಳ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಿನಾಂಕ 18.05.2024 ರಂದು ಅ.ಕ್ರ: 56/2024, ಕಲಂ: 9B(1)(b) Explosive act 1884 ಕಲಂ 5 The Explosives Substance Act-1908 ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪೈಕಿ ಶಶಿರಾಜ್‌ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆಯಲಾಗಿರುತ್ತದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಪ್ರಮುಖ ಆರೋಪಿ ಹಾಗೂ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಶಶಿರಾಜ್‌ ಪರವಾಗಿ, ಬೆಳ್ತಂಗಡಿ ವಿಧಾನಸಭಾ ಶಾಸಕರಾದ ಹರೀಶ್ ಪೂಂಜಾರವರು, ಇತರ ಕೆಲವು ಜನರೊಂದಿಗೆ, ದಿನಾಂಕ 18.05.2024 ರಂದು ರಾತ್ರಿ, ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ, ಆರೋಪಿಯು ಶಾಸಕರ ಪಕ್ಷದ ಕಾರ್ಯಕರ್ತನಾಗಿದ್ದು, ಆತನನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಸಿರುತ್ತಾರೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಇಲಾಖೆಯ ಬಗ್ಗೆ ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ, ದುರ್ವರ್ತನೆ ತೋರಿರುತ್ತಾರೆ. ಈ ಬಗ್ಗೆ ಶಾಸಕರಾದ ಹರೀಶ್ ಪೂಂಜಾರವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ. 57/2024 , ಕಲಂ:353, 504 IPC ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

- Advertisement -

Related news

error: Content is protected !!