Monday, June 22, 2026
spot_imgspot_img
spot_imgspot_img

ಲಾರಿಯಲ್ಲಿ ಟ್ರಾನ್ಸ್‌ಫಾರ್ಮರ್‌ ಇಟ್ಟು ಅಕ್ರಮ ಮದ್ಯ ಸಾಗಾಟ

- Advertisement -
- Advertisement -
This image has an empty alt attribute; its file name is ad-2-2.jpg

ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ ಅಕ್ರಮವಾಗಿ ಮದ್ಯ ಸಾಗಣೆ ಸದ್ದಿಲ್ಲದೇ ನಡೆಯುತ್ತಿದೆ. ಈ ಬೆನ್ನಲ್ಲೇ ಗೋವಾದಿಂದ ತೆಲಂಗಾಣಕ್ಕೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮದ್ಯವನ್ನು ಜಪ್ತಿ ಮಾಡುವಲ್ಲಿ ಬೆಳಗಾವಿಯ ಅಬಕಾರಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಹಿರೇಬಾಗೇವಾಡಿ ಟೋಲ್‌ ನಾಕಾ ಬಳಿ ದಾಳಿ ಮಾಡಿದ ಅಧಿಕಾರಿಗಳು, ಲಾರಿ ತಡೆದು ಚಾಲಕನ ವಿಚಾರಣೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ. ಎರಡು ಎಲೆಕ್ನಿಕ್‌ ಟ್ರಾನ್ಸ್‌ಫಾರ್ಮರ್‌ಗಳ ನಡುವೆ ಬಚ್ಚಿಟ್ಟಿದ್ದ 10 ಲಕ್ಷ ರೂ. ಮೌಲ್ಯದ 250 ರಟ್ಟಿನ ಪೆಟ್ಟಿಗೆಗಳಲ್ಲಿದ್ದ 5 ವಿವಿಧ ಕಂಪನಿಯ ಮದ್ಯವನ್ನು ಜಪ್ತಿ ಮಾಡಿರುವ ಅಬಕಾರಿ ಅಧಿಕಾರಿಗಳು, ಆರೋಪಿ ಲಾರಿ ಚಾಲಕ ಮಹಾರಾಷ್ಟ್ರದ ಮುಂಬೈ ನಿವಾಸಿ ಶ್ರೀರಾಮ್ ಸುಧಾಕರ್ ಪರಡೇ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಅದೇ ರೀತಿ 20 ಲಕ್ಷ ರೂ. ಮೌಲ್ಯದ ಲಾರಿಯನ್ನೂ ಜಪ್ತಿ ಮಾಡಲಾಗಿದೆ.

- Advertisement -

Related news

error: Content is protected !!