Thursday, May 16, 2024
spot_imgspot_img
spot_imgspot_img

ಬೆಳ್ತಂಗಡಿ: ಅಕ್ರಮವಾಗಿ ಹೊಳೆಯಿಂದ ಮರಳನ್ನು ಕಳವು ಮಾಡಿ, ಸಂಗ್ರಹ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮವಾಗಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸುಮಾರು 40 ಪ್ಲಾಸ್ಟಿಕ್‌ ಬುಟ್ಟಿಯಷ್ಟು ಮರಳನ್ನು ರಾಶಿ ಹಾಕುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

ದಿನಾಂಕ: 01.05.2024 ರಂದು ಮಧ್ಯಾಹ್ನ ಸಮಯ, ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಯಾವುದೇ ಪರವಾನಿಗೆಯನ್ನು ಪಡೆಯದೇ ಪಟ್ರಮೆ ಹೊಳೆಯಿಂದ ಮರಳನ್ನು ಕಳವು ಮಾಡಿ, ಮರಳನ್ನು ರಾಶಿ ಹಾಕಿರುವುದಾಗಿ ಮಾಹಿತಿ ಬಂದ ಮೇರೆಗೆ, ಧರ್ಮಸ್ಥಳ ಪೊಲೀಸ್‌ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸಮರ್ಥ ರ ಗಾಣಿಗೇರ ರವರು ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿ, ಈ ಬಗ್ಗೆ ಆರೋಪಿ ಶ್ರೀಧರ ಎಂಬಾತನ ವಿರುದ್ಧ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅ ಕ್ರ 29/2024 ಕಲಂ: 379 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!