- Advertisement -
- Advertisement -




5 ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆಯಲ್ಲಿ ನಡೆದಿದೆ.
ಕೊಲೆಯಾದ ಮಹಿಳೆ ನಗರದ ವಾಪಸಂದ್ರದ ನಿವಾಸಿ ದೀಪಾ (35) ಎಂದು ಗುರುತಿಸಲಾಗಿದೆ.
ಸುಧಾಕರ್ ಮತ್ತು ಸುರೇಶ್ ಎನ್ನುವವರು ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ದೀಪಾ ಅವರು 5 ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಸಂಬಂಧ ಮಹಿಳೆಯ ತಂದೆ ಸುಬ್ಬಾನಾಯ್ಡು ಠಾಣೆಯಲ್ಲಿ ದೂರು ನೀಡಿದ್ದರು. ಸದ್ಯ ಕಾಣೆಯಾಗಿದ್ದ ಮಹಿಳೆಯ ಶವ ಚಾಮರಾಜಪೇಟೆಯಲ್ಲಿ ಸುಧಾಕರ್ ಎನ್ನುವವರ ರೂಮ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಉಂಟು ಮಾಡಿದೆ.
ಮಹಿಳೆಯನ್ನು 5 ದಿನಗಳ ಹಿಂದೆಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
- Advertisement -