Sunday, May 5, 2024
spot_imgspot_img
spot_imgspot_img

ದುರಾಸೆಯೇ ಭ್ರಷ್ಟಾಚಾರದ ಮೂಲವಾಗಿದ್ದು ದುರಾಸೆಗೆ ಯಾವುದೇ ಔಷಧಿ ಇಲ್ಲ, ತುಂಬೆ ಸಂವಾದ ಕಾರ್ಯಕ್ರಮದಲ್ಲಿ ನ್ಯಾ| ಸಂತೋಷ್ ಹೆಗ್ಡೆ

- Advertisement -G L Acharya panikkar
- Advertisement -

ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕ ಹಾಗೂ ತುಂಬೆ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ “ಭ್ರಷ್ಟಾಚಾರ ಮುಕ್ತ ಸಮಾಜ, ಯುವ ಜನತೆಯ ಪಾತ್ರ” ಎಂಬ ವಿಷಯದ ಬಗ್ಗೆ ಸಂವಾದ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮಾತನಾಡಿ ದುರಾಸೆಯೇ ಭ್ರಷ್ಟಾಚಾರದ ಮೂಲವಾಗಿದ್ದು ದುರಾಸೆಗೆ ಯಾವುದೇ ಔಷಧಿ ಇಲ್ಲ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕಾದ್ಯಕ್ಷ ರಶೀದ್ ವಿಟ್ಲ ಪ್ರಸ್ತಾವನೆಗೈದರು.

ಕಾರ್ಯಕ್ರಮದಲ್ಲಿ ಜಮೀಯತುಲ್ ಫಲಾಹ್ ಸಂಸ್ಥೆಯ ಎನ್.ಆರ್.ಸಿ.ಸಿ. ಮಾಜಿ ಅಮೀರ್ ಶಾಹುಲ್ ಹಮೀದ್ ದಮ್ಮಾಮ್, ಜಿಲ್ಲಾಧ್ಯಕ್ಷ ಕೆ.ಕೆ.ಸಾಹುಲ್ ಹಮೀದ್ ಮುಖ್ಯಅತಿಥಿಗಾಳಾಗಿ ಭಾಗವಹಿಸಿ ಸಂವಾದ ನಡೆಸಿದರು.

ಅಜೀವ ಸದಸ್ಯರುಗಳಾದ ಹಾಜಿ ಪಿ.ಎಸ್.ಅಬ್ದುಲ್ ಹಮೀದ್ ನೆಹರು ನಗರ, ಆನಿಯಾ ದರ್ಬಾರ್ ಹಂಝ ಬಸ್ತಿಕೋಡಿ, ಕೋಶಾಧಿಕಾರಿ ಎಂ.ಎಚ್.ಇಕ್ಬಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹಾಗೂ ಜಮೀಯತುಲ್ ಫಲಾಹ್ ಸಂಸ್ಥೆಯ ಎನ್.ಆರ್.ಸಿ.ಸಿ. ಮಾಜಿ ಅಮೀರ್ ಶಾಹುಲ್ ಹಮೀದ್ ದಮ್ಮಾಮ್ ಅವರನ್ನು ಸನ್ಮಾನಿಸಲಾಯಿತು.

ಕಾಲೇಜು ವಿದ್ಯಾರ್ಥಿಗಳಾದ ಅಮಿತ್ ಶುಕ್ಲ, ಸಂಜನಾ, ಸೀಮಾ, ಸಬೀನಾ ಭಾನು, ಹಾಸಿಂ, ಸೃಜನ್ ಹಾಗೂ ಶಾಮಿಲ್ ಸಂತೋಷ್ ಹೆಗ್ಡೆ ಅವರೊಂದಿಗೆ ಸಂವಾದ ನಡೆಸಿದರು.

ಜಮೀಯತುಲ್ ಫಲಾಹ್ ಸಂಸ್ಥೆಯ ಮಾಜಿ ಜಿಲ್ಲಾಧ್ಯಕ್ಷ ಹಾಜಿ ಮೊಹಮ್ಮದ್ ಹನೀಫ್ ಗೋಳ್ತಮಜಲು, ತುಂಬೆ ಬಿ.ಎ.ಶಿಕ್ಷಣ ಸಂಸ್ಥೆಯ ಮೆನೇಜರ್ ಮುಹಮ್ಮದ್ ಕಬೀರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಿಸಾರ್ ವಳವೂರು, ಉಪಾಧ್ಯಕ್ಷೆ ಮೋಹಿನಿ ಸುವರ್ಣ ಭಾಗವಹಿಸಿದ್ದರು.

ತುಂಬೆ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಗಂಗಾಧರ ಆಳ್ವ ಕೆ.ಎನ್.ಸ್ವಾಗತಿಸಿ, ಹಕೀಂ ಕಲಾಯಿ ವಂದಿಸಿದರು. ಅಹ್ಮದ್ ಮುಸ್ತಫಾ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!