


ಪೆರುವಾಯಿ: ಹನುಮಾನ್ ಫ್ರೆಂಡ್ಸ್ ಪೆರುವಾಯಿ ಇದರ ವತಿಯಿಂದ ಆಟಿ ತಿಂಗಳ ವೈಶಿಷ್ಟ್ಯ ತುಳುನಾಡಿನ ವಿವಿಧ ಸಂಸ್ಕೃತಿ, ಆಚಾರ ವಿಚಾರಗಳ ಅಂಗವಾಗಿ ‘ಆಟಿದ ಕೂಟಡ್ ಕೆಸರ್ದ ಗೊಬ್ಬು’ ಎಂಬ ವೈವಿಧ್ಯಮಯ ಕ್ರೀಡಾಕೂಟವನ್ನು ಆಗಸ್ಟ್ 16ರಂದು ಪೆರುವಾಯಿ ಕೊಲ್ಲತ್ತಡ್ಕ ಶಾಲಾ ಬಳಿಯ ಗದ್ದೆಯಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಹಗ್ಗಜಗ್ಗಾಟ,ವಾಲಿಬಾಲ್, ಕಬಡ್ಡಿ, ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ವಿವಿಧ ವಯೋಮಾನದವರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹಲವು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಬೆಳಗ್ಗೆ 9 ಗಂಟೆಗೆ ನಡೆಯಲಿದ್ದು, ಕ್ರೀಡಾಕೂಟದ ಉದ್ಘಾಟನೆಯನ್ನು ಶ್ರೀ ನಾರಾಯಣ ರೈ ಅಡಿವಾಯ ನೆರವೇರಿಸಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ವಿವಿಧ ಕ್ರೀಡಾ ಸ್ಪರ್ಧೆಗಳು ಆರಂಭವಾಗಲಿವೆ. ಸಂಜೆ 5 ಗಂಟೆಗೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಾಜಪ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು, ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ,ಭಾಜಪ ಪುತ್ತೂರು ಮಂಡಲದ ಕಲೆ ಮತ್ತು ಸಾಂಸ್ಕೃತಿಕ ಕೋಷ್ಟಕ ಅಧ್ಯಕ್ಷರಾದ ಮೋಹನದಾಸ ರೈ ಎರುಂಬು, ಉದ್ಯಮಿ ಗೌತಮ್ ಶೆಟ್ಟಿ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು, ಸಂಘ-ಸಂಸ್ಥೆಗಳ ಪ್ರಮುಖರು ಹಾಗೂ ಕ್ರೀಡಾಭಿಮಾನಿಗಳು ಭಾಗವಹಿಸಲಿದ್ದಾರೆ.
ಆಟಿ ತಿಂಗಳ ಸಾಂಪ್ರದಾಯಿಕ ಆಚರಣೆ, ಗ್ರಾಮೀಣ ಕ್ರೀಡೆ ಹಾಗೂ ಸ್ಥಳೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಯುವಕರು, ಮಕ್ಕಳು, ಮಹಿಳೆಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹನುಮಾನ್ ಫ್ರೆಂಡ್ಸ್ ಪೆರುವಾಯಿ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಮನವಿ ಮಾಡಿದ್ದಾರೆ.








